Monday, May 13, 2024
spot_imgspot_img
spot_imgspot_img

ಬೆಂಗಳೂರು ಕಂಬಳ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಲಿದೆ – ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ

- Advertisement -G L Acharya panikkar
- Advertisement -

‘ಬೆಂಗಳೂರಿನ ಅರಮನೆ ಮೈದಾನದಲ್ಲಿ ನ.25 ಮತ್ತು 26 ರಂದು ನಡೆಯಲಿರುವ ‘ಬೆಂಗಳೂರು ಕಂಬಳ- ನಮ್ಮ ಕಂಬಳ’ಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಈ ಕಾರ್ಯಕ್ರಮ ಕಂಬಳ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಟಿಸಲಿದೆ,” ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದರು.

ಮಂಗಳೂರು ಪ್ರೆಸ್‌ಕ್ಲಬ್‌ನ ಗೌರವ ಅತಿಥಿಯಾಗಿ ಭಾಗವಹಿಸಿ ಗೌರವ ಸ್ವೀಕರಿಸಿದ ಅವರು, ಬೆಂಗಳೂರು ಕಂಬಳದ ಬಗ್ಗೆ ಮಾಹಿತಿ ನೀಡಿದರು.

ದ.ಕ. ಮತ್ತು ಉಡುಪಿ ಜಿಲ್ಲೆಯ ತುಳು ಸಂಸ್ಕೃತಿ, ಇಲ್ಲಿನ ವೈಭವವನ್ನು ರಾಜ್ಯ ಹಾಗೂ ರಾಷ್ಟ್ರದ ಜನತೆಗೆ ತೋರಿಸುವ ಜತೆಗೆ ಕಂಬಳದ ಇತಿಹಾಸದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸುವ ಉದ್ದೇಶವನ್ನು ಕೂಡಾ ಹೊಂದಲಾಗಿದೆ. ಅದಕ್ಕಾಗಿ ಕಂಬಳದ ಕರೆಯ ಉದ್ದವನ್ನು 155 ಮೀಟರ್‌ಗೆ ಏರಿಕೆ ಮಾಡಲಾಗಿದೆ. ಕಂಬಳದ ವಿವಿಧ ವಿಭಾಗಗಳಲ್ಲಿ ಜಯಗಳಿಸುವ ಕಂಬಳದ ಕೋಣಗಳಿಗೆ, ಓಡಿಸುವವರಿಗೆ ಬಹುಮಾನ ಮೊತ್ತ ಭಾಗವಹಿಸುವ ಪ್ರತಿ ಕೋಣಗಳ ಯಜಮಾನರಿಗೆ ಗೌರವಧನ ನೀಡುವ ನಿಟ್ಟಿನಲ್ಲಿ ನಿರ್ಧಾರ ಮಾಡಲಾಗಿದೆ. ಈಗಾಗಲೇ 116 ಜೋಡಿ ಕೋಣಗಳ ನೋಂದಣಿಯಾಗಿದೆ. ಇನ್ನೂ ಹಲವು ಕೋಣಗಳ ಯಜಮಾನರು ಭಾಗವಹಿಸಲು ಆಸಕ್ತಿ ತೋರಿದ್ದಾರೆ ಎಂದು ಅಶೋಕ್ ರೈ ವಿವರ ನೀಡಿದರು.

ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗರಿಷ್ಟ 60,000ದಷ್ಟು ಏಕಕಾಲಕ್ಕೆ ಸೇರಿದ ದಾಖಲೆ ಇದ್ದು, ಕಂಬಳದ ಎರಡು ದಿನಗಳ ಅವಧಿಯಲ್ಲಿ ಅಂದಾಜು 8 ಲಕ್ಷ ಮಂದಿ ಸೇರುವ ನಿರೀಕ್ಷೆ ಇದೆ. ಅದಕ್ಕೆ ಅಗತ್ಯವಾದ ಎಲ್ಲಾ ತಯಾರಿ ನಡೆಸಲಾಗುತ್ತಿದೆ. ಕಂಬಳ ವೀಕ್ಷಣೆಗೆ ಈಗಾಗಲೇ ರಾಜ್ಯದ ಐಎಎಸ್, ಐಪಿಎಸ್ ಸೇರಿದಂತೆ ಹಿರಿಯ ಶ್ರೇಣಿಯ ಅಧಿಕಾರಿಗಳು ತಮ್ಮ ಕುಟುಂಬ ಸಹಿತವಾಗಿ ಭಾಗವಹಿಸಲು ಅವಕಾಶ ಕೋರಿದ್ದಾರೆ. ಹಾಗಾಗಿ ವಿವಿಐಪಿ, ವಿಐಪಿ ಸೇರಿದಂತೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅಶೋಕ್ ರೈ ವಿವರ ನೀಡಿದರು.

- Advertisement -

Related news

error: Content is protected !!