Monday, July 20, 2026
spot_imgspot_img
spot_imgspot_img

ಬೆಂಗಳೂರು: ಬಿಜೆಪಿ ಕಾನೂನು ಪ್ರಕೋಷ್ಠದಿಂದ ಇಂದು ‘ಎಸ್.ಐ.ಆರ್. ವಿಶೇಷ ಸಭೆ’

- Advertisement -
- Advertisement -

ಬೆಂಗಳೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಕರ್ನಾಟಕ ಕಾನೂನು ಪ್ರಕೋಷ್ಠದ ವತಿಯಿಂದ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಕೀಲರಿಗಾಗಿ ’ಎಸ್.ಐ.ಆರ್. ವಿಶೇಷ ಸಭೆ’ ಇಂದು(ಜು.12) ಬೆಂಗಳೂರಿನ ಜಗನ್ನಾಥ ಭವನದಲ್ಲಿ ನಡೆಯಲಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಆಯೋಜಿಸಲಾದ ಈ ಸಭೆಯನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಭಲವಾದಿ ನಾರಾಯಣಸ್ವಾಮಿ ಉದ್ಘಾಟಿಸಲಿದ್ದು, ಕರ್ನಾಟಕ ಹೈಕೋರ್ಟ್‌ನ ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹಾಗೂ ಹಿರಿಯ ವಕೀಲ ಅರುಣ್ ಶ್ಯಾಮ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಾಜ್ಯ ಪ್ರಕೋಷ್ಠಗಳ ಸಂಯೋಜಕರು ಮತ್ತು ಎಸ್.ಐ.ಆರ್. ರಾಜ್ಯ ಸಂಚಾಲಕ ಎಸ್. ದತ್ತಾತ್ರಿ ಉಪಸ್ಥಿತರಿರಲಿದ್ದಾರೆ.

ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ವಸಂತಕುಮಾರ್ ಮತ್ತು ರಾಜ್ಯ ಸಹ ಸಂಚಾಲಕರಾದ ಲಕ್ಷ್ಮಣ ಕುಲಕರ್ಣಿ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನಸಭಾ ಕ್ಷೇತ್ರದಿಂದ ನಿಯೋಜಿಸಲ್ಪಟ್ಟ ವಕೀಲರು, ರಾಜ್ಯ ಸಮಿತಿ ಸದಸ್ಯರು, ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರು ಈ ಸಭೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

- Advertisement -

Related news

error: Content is protected !!