Thursday, July 23, 2026
spot_imgspot_img
spot_imgspot_img

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

- Advertisement -
- Advertisement -

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಬೊಮ್ಮಸಂದ್ರದಲ್ಲಿ ನಡೆದಿದೆ.

ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಪಿಜಿ ಇದಾಗಿದ್ದು, ಲಿಂಗರಾಜು ಎಂಬವರಿಗೆ ಲೀಸ್‌ಗೆ ನೀಡಿದ್ದರು. ಈ ಕಟ್ಟಡ 18 ಕೊಠಡಿಗಳನ್ನು ಒಳಗೊಂಡಿದ್ದು, 10ಕ್ಕೂ ಹೆಚ್ಚು ಅನ್ಯರಾಜ್ಯದವರು ವಾಸವಾಗಿದ್ದರು. ಉತ್ತರ ಭಾರತದ ಕಾರ್ಮಿಕರು ಈ ಪಿಜಿಯಲ್ಲಿ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಎದ್ದು ಲೈಟ್‌ ಆನ್‌ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದಿಂದ ಗಂಭೀರ ಗಾಯಗೊಂಡಿರುವ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!