Wednesday, July 29, 2026
spot_imgspot_img
spot_imgspot_img

ಬೆಂಗಳೂರು- ಮಂಗಳೂರು ಚತುಷ್ಪಥ ರಸ್ತೆ ಕಾಮಗಾರಿಗೆ ಮರು ಮರುಜೀವ- ಸಂಸದ ನಳಿನ್ ಕುಮಾರ್ ಕಟಿಲು.

- Advertisement -
- Advertisement -

ಮಂಗಳೂರು: ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರ ಚತುಷ್ಪಥ ಕಾಮಗಾರಿ ಸದ್ಯದಲ್ಲೇ ಆರಂಭಗೊಳ್ಳುವ ಲಕ್ಷಣಗಳು ಗೋಚರಿಸಲಾರಂಭಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗಿನ ಸುಮಾರು 65 ಕಿಲೋ ಮೀಟರ್ ರಸ್ತೆಯ ಚತುಷ್ಪಥ ಕಾಮಗಾರಿಗೆ ಮರು ಟೆಂಡರ್ ಅನ್ನು ಇ ಕರೆದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕಾಮಗಾರಿಯು ಆರಂಭಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ಅಂದುಕೊಂಡಂತೆ ಎಲ್ಲವೂ ನಡೆಯುತ್ತಿದ್ದಲ್ಲಿ, ಇದೀಗ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಬಿಸಿ ರೋಡ್ ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ ಮುಗಿದು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿತ್ತು. ಆದರೆ ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದ ಎಲ್. ಎಂಡ್ ಟಿ ಕಂಪನಿಯು ಕಾಮಗಾರಿಯಿಂದ ಅರ್ಧಕ್ಕೇ ಹಿಂದೆ ಸರಿದ ಹಿನ್ನಲೆಯಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯು ಅರ್ಧದಲ್ಲೇ ನಿಂತು ಹೋಗಿದೆ ಇದೀಗ ಈ ಕಾಮಗಾರಿಗೆ ಮತ್ತೆ ಟೆಂಡರ್ ಕರೆಲಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್

ತಿಳಿಸಿದ್ದಾರೆ.

- Advertisement -

Related news

error: Content is protected !!