- Advertisement -
- Advertisement -


ಬೆಂಗಳೂರು: ಬೆಂಗಳೂರಿನಲ್ಲಿ ಎರಡನೇ ಏರ್ ಪೋರ್ಟ್ ನಿರ್ಮಾಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದುಕೊಂಡ ನಂತರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮೂಲಸೌಕರ್ಯ ಸಚಿವ ಎಂ. ಬಿ. ಪಾಟೀಲ್ ಭಾನುವಾರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂಬ ಮಾಹಿತಿ ನೀಡಲು ನಿರಾಕರಿಸಿದರು. ಮುಂದಿನ ಎರಡ್ಮೂರು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಸಭೆ ನಡೆಸಿ, ಅವರಿಗೆ ಎಲ್ಲಾ ಮಾಹಿತಿ ನೀಡಲಾಗುವುದು ಎಂದರು.ಸಿಎಂ ಸಿದ್ದರಾಮಯ್ಯ ಅವರಿಂದ ಒಪ್ಪಿಗೆ ಪಡೆದ ನಂತರ ಕೇಂದ್ರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗುವುದು ಎಂದು ತಿಳಿಸಿದರು. ಎರಡನೇ ವಿಮಾನ ನಿಲ್ದಾಣಕ್ಕಾಗಿ ಐದು ಜಾಗಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.
- Advertisement -








