Friday, April 26, 2024
spot_imgspot_img
spot_imgspot_img

ಬನ್ನೂರುನಲ್ಲಿ ಗ್ರಾಮಸ್ಥರಿಗೆ ಯೋಗಾಸನ ಶಿಬಿರ

- Advertisement -G L Acharya panikkar
- Advertisement -

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜು, ಬನ್ನೂರು ಗ್ರಾಮ ವಿಕಾಸ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬನ್ನೂರು ಇವುಗಳ ಸಹಭಾಗಿತ್ವದಲ್ಲಿ ಬನ್ನೂರಿನ ಕುಂಟ್ಯಾನ ಸದಾಶಿವ ದೇವಸ್ಥಾನದ ವಠಾರದಲ್ಲಿ ಗ್ರಾಮಸ್ಥರಿಗೆ ಆಕ್ಟೋಬರ್ ಒಂದರಂದು ಯೋಗಾಸನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬನ್ನೂರು ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷ ಸೇಡಿಯಾಪು ಜನಾರ್ಧನ ಭಟ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ಯೋಗಕ್ಕಿರುವ ಅಗಾಧ ಶಕ್ತಿ ಬೇರೊಂದಿಲ್ಲ, ಸಣ್ಣ ಕಾಲಾವಧಿಯಲ್ಲೂ ಯೋಗಮಾಡಿ ನೆಮ್ಮದಿ ಪಡೆಯಬಹುದು. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗವನ್ನು ಸ್ವಇಚ್ಛೆಯಿಂದ ಮಾಡಬೇಕು. ಮಾನವಕುಲದ ಏಕತೆಯ ಪರಿಕಲ್ಪನೆಗೆ ಯೋಗ ಪ್ರಾಮುಖ್ಯವಾದುದು ಎಂದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ಶಿಕ್ಷಕ ಚಂದ್ರಶೇಖರ್ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಶಿಬಿರಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಅಕ್ಟೋಬರ್ 7 ರವರೆಗೆ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀದುರ್ಗಾ ಒಕ್ಕೂಟದ ಅಧ್ಯಕ್ಷ ಮತ್ತು ಬನ್ನೂರು ಗ್ರಾಮ ವಿಕಸ ಸಮಿತಿಯ ಸಂಚಾಲಕ ರತ್ನಾಕರ ಪ್ರಭು ಸಕಲ ವ್ಯವಸ್ಥೆಯನ್ನು ನಿರ್ವಹಿಸಿದರು.ಗ್ರಾಮ ವಿಕಾಸ ಸಮಿತಿಯ ಸದಸ್ಯ ಗಿರೀಶ್ ಕುಲಾಲ್, ಜನಜೀವನ ಸಮಿತಿಯ ವಲಯ ಅಧ್ಯಕ್ಷ ಶಿನಪ್ಪ ಕುಲಾಲ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಗ್ರಾಮ ವಿಕಾಸ ಯೋಜನೆಯ ಪ್ರಭಾರಿ ಜಯಗೋವಿಂದಶರ್ಮಾ ಮತ್ತು ಉಪನ್ಯಾಸಕ ಕಾರ್ತಿಕ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀದುರ್ಗಾ ಒಕ್ಕೂಟದ ಕಾರ್ಯದರ್ಶಿ ಗಂಗಾಧರ ಮೂಲ್ಯ ಕಾರ‍್ಯಕ್ರಮವನ್ನು ನಿರೂಪಿಸಿ ವಂದಿಸಿದರು.

- Advertisement -

Related news

error: Content is protected !!