Thursday, September 3, 2026
spot_imgspot_img
spot_imgspot_img

ಬಂಟ್ವಾಳ: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸಾವು

- Advertisement -
- Advertisement -

ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ, ಪಾಣೆಮಂಗಳೂರು-ಮೆಲ್ಕಾರ್ ನಡುವಿನ ರಸ್ತೆಯಲ್ಲಿ ಭಾನುವಾರ(ಜು.7) ಸಂಜೆ ಸಂಭವಿಸಿದೆ.

ಮೃತಪಟ್ಟವರನ್ನು ಪುತ್ತೂರು ನಿವಾಸಿ ಅಶೋಕ್ (34) ಎಂದು ಗುರುತಿಸಲಾಗಿದೆ.

ವರದಿಗಳ ಪ್ರಕಾರ, ಬಿ.ಸಿ. ರೋಡ್ ಕಡೆಗೆ ತೆರಳುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಒನ್-ವೇ ನಿಯಮವನ್ನು ಉಲ್ಲಂಘಿಸಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ಮತ್ತು ಕಾರು ಎರಡೂ ಜಖಂಗೊಂಡಿದ್ದು, ಅಪಘಾತದ ರಭಸಕ್ಕೆ ಬೈಕ್ ಸವಾರ ಅಶೋಕ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!