





ಬಂಟ್ವಾಳ: ಕಲ್ಲಡ್ಕ ಸಮೀಪದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಮೇ 2ರಂದು ಆರಂಭಗೊಂಡಿದ್ದ, ರಾಜ್ಯದಲ್ಲೇ ಮೊದಲ ಬಾರಿ ಸಾರ್ವಜನಿಕವಾಗಿ ನಡೆದ “ಅತಿಮಹಾರುದ್ರಯಾಗ” ಭಾನುವಾರ ಮಧ್ಯಾಹ್ನ ಸಂಪನ್ನಗೊಂಡಿತು. ಕಾಶಿ ಸಂಸ್ಥಾನ ಮಠಾಧೀಶ ವಾರಾಣಸಿ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿ ಮಾರ್ಗ ದರ್ಶನದಲ್ಲಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ನೇತೃತ್ವದಲ್ಲಿ ಲೋಕ ಕಲ್ಯಾಣಕ್ಕಾಗಿ ಯಾಗ ನಡೆಯಿತು. -ವಿದ್ವಾನ್ ಗಣಪತಿ ಭಟ್ ತಿರುಪತಿಯವರು ಯಾಗದ ಮಹತ್ವದ ಬಗ್ಗೆ ವಿವರಿಸಿದರು.
ಯಾಗ ಸಮಿತಿ ಅಧ್ಯಕ್ಷ ಬ್ರಹ್ಮಾನಂದ ರೆಡ್ಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಗೌರವಾಧ್ಯಕ್ಷ ರಘುನಾಥ ಸೋಮಯಾಜಿ, ಪ್ರಧಾನ ಕಾರ್ಯ ದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು, ಸೂರಜ್ ಶೆಟ್ಟಿ ಮಂಗಳೂರು ನೇತೃತ್ವ ವಹಿಸಿದ್ದರು.ಜಗದ್ಗುರು ಕಾಶಿಪೀಠ ವಾರಣಾಸಿಯ ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾ ಸ್ವಾಮೀಜಿ, ಅಂಜನಾಪುರ ಚಿಕ್ಕಮಗಳೂ ರಿನ ಶಿವಾನಂದಾಶ್ರಮದ ಸ್ವಾಮಿ ಚಿದಾನಂದಗಿರಿ, ರಾಜಸ್ಥಾನದ ಕೇದಾರ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಸೋಲೂರು ಮಠದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಮೂಡುಬಿದಿರೆ ಮೂಡುಬಿದಿರೆ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ ಸ್ವಾಮೀಜಿ ಸಹಿತ ಸಂತರು, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಾಳ ಶಾಸಕ ರಾಜೇಶ್ ಯು. ನಾಯ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ. ರಮಾನಾಥ ರೈ, ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್, ಮಾಜಿ ಶಾಸಕರಾದ ಎ.ರುಕ್ಷಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಟೀಲು ಕ್ಷೇತ್ರದ ಅರ್ಚಕರಾದ ವೆಂಕಟರಮಣ ಆಸ್ರಣ್ಣ, ವಾಸುದೇವ ಆಸ್ರಣ್ಣ, ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಮಲ್ಲಿಕಾ ಪಕ್ಕಳ ಸಹಿತ ಊರ, ಪರವೂರ ಗಣ್ಯರು ಆಗಮಿಸಿದರು.








