


ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತುಂಬೆ ಗ್ರಾಮದ ನಿವಾಸಿ ಶಿವಪ್ರಸಾದ್ (33) ಬಂಧಿತ ಆರೋಪಿ. ಈಗಾಗಲೇ ಪ್ರಕರಣ ಸಂಬಂಧ ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಸೇರಿ 9 ಆರೋಪಿಗಳನ್ನು ಬಂಧಿಸಲಾಗಿದೆ.
ಸದ್ಯ ಬಂಟ್ವಾಳದ ರಾಯಿ ಎಂಬಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿದೆ.
ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಎನ್ನುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ತಿಂಗಳು ಕಳೆಯುವ ಮೊದಲೇ ಮೇ 27ರಂದು ಬಂಟ್ವಾಳದ ಕುರಿಯಾಳ ಈರಾಕೋಡಿ ಎಂಬಲ್ಲಿ ಮಧ್ಯಾಹ್ನ 3:30ರ ಸುಮಾರಿಗೆ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.