Sunday, June 14, 2026
spot_imgspot_img
spot_imgspot_img

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ 20ಕ್ಕೂ ಅಧಿಕ ಪ್ರಕರಣಗಳ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: 20ಕ್ಕೂ ಅಧಿಕ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಜಿಪಮೂಡ ಗ್ರಾಮದ ಫಾರೂಕ್ ಯಾನೆ ಉಮ್ಮರ್ ಫಾರೂಕ್ (32) ಎಂದು ಗುರುತಿಸಲಾಗಿದೆ.

ಅ.15ರಂದು ಬಂಟ್ವಾಳ ತಾಲೂಕಿನ ಮದ್ವ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈತನ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ ನಂ:38/20 ಕಲಂ: 457,380 IPC,
39/2020 ಕಲಂ: 380,201, 34 IPC,
48/2012 ಕಲಂ: 379,201,34 IPC,
119/2020 ಕಲಂ: 457,380 IPC,
ಕಡಬ ಪೊಲೀಸ್‌ ಠಾಣಾ ಅ.ಕ್ರ 43/2020,44/2020,45/2020,46/2020 ಕಲಂ: 457.380 IPC ಮತ್ತು ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೋಣಾಜೆ, ಬರ್ಕೆ, ಬಜಪೆ ಪೊಲೀಸ್‌ ಠಾಣೆಗಳಲ್ಲಿ ಈತನ ಮೇಲೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!