Sunday, August 2, 2026
spot_imgspot_img
spot_imgspot_img

ಬಂಟ್ವಾಳ: ಎ.ಎಸ್.ಐ ಜಯರಾಮ ರೈ ಹೃದಯಾಘಾತದಿಂದ ಸಾವು!

- Advertisement -
- Advertisement -

ಬಂಟ್ವಾಳ: ಅಸೌಖ್ಯದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಎ.ಎಸ್.ಐ.ರೊರ್ವರು ಹೃದಯಾಘಾತದಿಂದ ಮೃತ ಘಟನೆ ನಡೆದಿದೆ.

ಮಂಚಿ ನಿವಾಸಿ ಬಂಟ್ವಾಳ ನಗರ ಠಾಣಾ ಎ.ಎಸ್.ಐ.ಜಯರಾಮ ರೈ (58)ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

ಅವರು ಕೆಲ ದಿನಗಳಿಂದ ಬೆನ್ನು ನೋವು ಸಮಸ್ಯೆ ಯಿಂದ ಬಳಲುತ್ತಿದ್ದು ಒಂದು ವಾರದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಇವರು ದ.ಕ.ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಂತ ಕ್ಲಿಷ್ಟಕರವಾದ ಪರಿಸ್ಥಿತಿ ಯಲ್ಲಿ ಹಲವಾರು ವರ್ಷಗಳಿಂದ ಅಪರಾಧ ವಿಭಾಗದಲ್ಲಿ ಕೆಲಸ ಮಾಡಿದ್ದಾರೆ.

ಅವರು ಇತ್ತೀಚಿನ ವರ್ಷಗಳಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಎ.ಎಸ್.ಐ.ಅಗಿ ಕರ್ತವ್ಯ ಮಾಡುತ್ತಿದ್ದರು. ಉತ್ತಮವಾದ ನಡತೆಯ ಒಬ್ಬ ನಿಷ್ಠಾವಂತ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಪತ್ನಿ , ಪುತ್ರ, ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

- Advertisement -

Related news

error: Content is protected !!