Monday, July 20, 2026
spot_imgspot_img
spot_imgspot_img

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್ ಸೋಂಕರ್ (28) ಎಂದು ಗುರುತಿಸಲಾಗಿದೆ.

ಈತನಿಂದ 58650 ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಲಾಗಿದೆ. 1173 ಪ್ಲಾಸ್ಟಿಕ್ ಸ್ಯಾಚೆಟ್ ಗಳಲ್ಲಿ ಗಾಂಜಾ ಪದಾರ್ಥವನ್ನು ಹೊಂದಿದ್ದು ,ಒಟ್ಟು 6 ಕೆಜಿ 590 ಗ್ರಾಂ ಗಾಂಜಾ ಉಂಡೆಗಳನ್ನು ಪತ್ತೆಹಚ್ಚಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಬಿ.ಸಿ. ರೋಡಿನ ರೈಲ್ವೆ ಹಳಿಯಲ್ಲಿ ಗಿರಾಕಿಗಳಿಗೆ ನೀಡುವು ಉದ್ದೇಶದಿಂದ ಅಲೆದಾಡುವ ಬಗ್ಗೆ ಮಾಹಿತಿ ಪಡೆದ ಅಬಕಾರಿ ಪೋಲೀಸರು ದಾಳಿ ನಡೆಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!