Tuesday, July 28, 2026
spot_imgspot_img
spot_imgspot_img

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬಂಟ್ವಾಳ: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಬಂಧೀತ ಆರೋಪಿಗಳನ್ನು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಎಂದು ಗುರುತಿಸಲಾಗಿದೆ.

ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ (ಕಾ & ಸು) ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು.

ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋ ರಿಕ್ಷಾ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅವರುಗಳು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ. ತಪಾಸಣೆ ವೇಳೆ ಕಾರಿನಿಂದ 450 ಗ್ರಾಂ ಹಾಗೂ ಆಟೋ ರಿಕ್ಷಾದಿಂದ 360 ಗ್ರಾಂ ಸೇರಿ ಒಟ್ಟು 810 ಗ್ರಾಂ ಗಾಂಜಾವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಮುಂದಿನ ಕಾನೂನು ಕ್ರಮಕ್ಕಾಗಿ ಗಾಂಜಾ ಹಾಗೂ ಬಳಕೆಯಲ್ಲಿದ್ದ ಎರಡೂ ವಾಹನಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 183/2025 ಅಡಿಯಲ್ಲಿ, NDPS ಕಾಯ್ದೆಯ ಕಲಂ 8(C), 20(B)(ii)(a) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!