Sunday, June 14, 2026
spot_imgspot_img
spot_imgspot_img

ಬಂಟ್ವಾಳ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋ ರಿಕ್ಷಾ; ಚಾಲಕ ಮೃತ್ಯು, ಮೂವರಿಗೆ ಗಾಯ..!

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಗಾಣೆಮಾರ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ( 37) ಹಾಗೂ ಗಾಯಗೊಂಡವರನ್ನು ಈತನ ಸಂಬಂಧಿಗಳಾದ ತುಷಾ‌ರ್,ಭವಿತ್ ಮತ್ತು ಪ್ರದೀಪ್ ಎಂದು ಗುರುತಿಸಲಾಗಿದೆ.

ಮೂಡಬಿದಿರೆಯ ಮಿಜಾರು ಎಂಬಲ್ಲಿಗೆ ಜಾತ್ರೆಗೆ ಹೋಗಿ ಮರಳುವ ವೇಳೆ ಮನೆಗೆ ಸುಮಾರು 500 ಮೀ ದೂರದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ರಿಕ್ಷಾ ತಲೆಕೆಳಗಾದ ಸ್ಥಿತಿಯಲ್ಲಿ ಚರಂಡಿಗೆ ಬಿದ್ದಿದೆ. ಮೂವರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!