Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಲಾರಿ

- Advertisement -G L Acharya panikkar
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ.

ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ. ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಲಾರಿ ಮಧ್ಯ ರಾತ್ರಿ 12.45 ರ ಸುಮಾರಿಗೆ ಬಿದ್ದಿದೆ ಎನ್ನಲಾಗಿದೆ. ಬಾಂಬಿಲ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಕಳೆದುಕೊಂಡು ಮನೆಯ ಮಹಡಿ ಮೇಲೆ ಹಾರಿದೆ ಎಂದು ಹೇಳಲಾಗಿದೆ. ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

- Advertisement -

Related news

error: Content is protected !!