- Advertisement -
- Advertisement -



ಬಂಟ್ವಾಳ: ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಂಜನಪದವು ಸಮೀಪದ ಕಲ್ಪಣೆ ಎಂಬಲ್ಲಿ ನಡೆದಿದೆ.
ಅಮ್ಮಾಡಿ ದೇವಿನಗರ ಲೋರಿಬೆಟ್ಟು ನಿವಾಸಿ ಸುಚಿನ್ ಎಸ್.(14) ಮೃತಪಟ್ಟ ಬಾಲಕ. ಈತ ಸ್ಥಳೀಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ.
ನ.14ರಂದು ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸುಚಿನ್ ಬೈಕಲ್ಲಿ ಬೆಂಜನಪದವಿನಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಪಣೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಸುಚಿನ್ ನನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನ.15ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








