Saturday, June 6, 2026
spot_imgspot_img
spot_imgspot_img

ಬಂಟ್ವಾಳ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ಭೀಕರ ಅಪಘಾತ: ಇಬ್ಬರಿಗೆ ಗಂಭೀರ ಗಾಯ..!

- Advertisement -
- Advertisement -

ಬಂಟ್ವಾಳ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಾವಳಮೂಡೂರು ಗ್ರಾಮದ ಮಾದಡ್ಕ ನಿವಾಸಿ ಧನುಷ್ ಹಾಗೂ ಪರಾರ್ದೊಟ್ಟು ನಿವಾಸಿ ದೀಕ್ಷಿತ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಬಸ್ ನ ಮುಂಭಾಗದ ಗಾಜು ಢಿಕ್ಕಿಯ ರಭಸಕ್ಕೆ ಸಂಪೂರ್ಣ ಹುಡಿಯಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಂಟ್ವಾಳ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!