Friday, June 27, 2025
spot_imgspot_img
spot_imgspot_img

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ; ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಮೃತ್ಯು..!

- Advertisement -
- Advertisement -

ಬಂಟ್ವಾಳ: ದ್ವಿಚಕ್ರದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ (22) ಎಂದು ಗುರುತಿಸಲಾಗಿದೆ.

ಲಿಖಿತ್ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಸುಮಾರು 5.30ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಸಂಚಾರ ಮಾಡುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿಕ್ಕಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸರು ಘಟನಾ ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!