- Advertisement -
- Advertisement -



ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.
ಇವರು ಶನಿವಾರ ಬೆಳಿಗ್ಗೆ, ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
- Advertisement -