Friday, June 5, 2026
spot_imgspot_img
spot_imgspot_img

ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ

- Advertisement -
- Advertisement -

ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ನಡೆದಿದೆ.

ಬಂಧಿತ ಆರೋಪಿಗಳನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಹಾಗೂ ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ.

ದಿನಾಂಕ:14.08.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ದಿನಾಂಕ 15.08.2025 ರಂದು ಅಲ್ಲೆ ಸಮೀಪದಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ದಿನಾಂಕ 05.09.2025 ರಂದು ದಸ್ತಗಿರಿ ಮಾಡಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಆರೋಪಿಗಳ ದಿನಾಂಕ: 04.09.2025 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಕ್ರ:76/2025, Sec:THE BHARATIYA NYAYA SANHITA (BNS), 2023 (U/s-331(4),305); THE KARNATAKA PREVENTION OF SLAUGHTER AND PRESERVATION OF CATTLE ACT-2020 (U/s-4,5) ಪ್ರಕರಣದಲ್ಲೂ ಆರೋಪಿಗಳಾಗಿರುತ್ತಾರೆ.

ಪ್ರಕರಣದ ಆರೋಪಿಗಳ ಮೇಲೆ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!