ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಸಂಜೀವ ಕೆ. ಅವರು ಆದಿತ್ಯವಾರ ಬೆಳಿಗ್ಗೆ ಅಧಿಕಾರ ಸ್ವೀಕಾರಿಸಿದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಪ್ರಸ್ತುತ ಎಸ್‌ಐ ಆಗಿ ಪದೋನ್ನತ್ತಿ ಹೊಂದಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅವರು ಈ ಹಿಂದೆ ಪುಂಜಾಲಕಟ್ಟೆ, ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ಅಪರಾಧ ವಿಭಾಗದ ಲ್ಲಿ ಎ.ಎಸ್.ಐ.ಅಗಿ ಕರ್ತವ್ಯ ನಿರ್ವಹಿಸಿದ ವೇಳೆ ಅನೇಕ ಅಪರಾಧ ಪ್ರಕರಣಗಳನ್ನು ಇವರು ಭೇದಿಸಿ ದ್ದರು.ಜಿಲ್ಲೆಯ ವಿವಿಧ ಠಾಣೆಯಲ್ಲಿ ಇವರು ಕರ್ತವ್ಯ ನಿರ್ವಹಿಸಿದ್ದಾರೆ.
ಅವರನ್ನು ಇಂದು ಬೆಳಿಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಪ್ರಸನ್ನ ಸ್ವಾಗತಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜ ಮಾರ್ಗದರ್ಶನ ಪಡೆದರು. ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.