Sunday, May 5, 2024
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

- Advertisement -G L Acharya panikkar
- Advertisement -

ಬಂಟ್ವಾಳ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಸುಮಾರು 45-50 ವರ್ಷ ವಯಸ್ಸಿನ ವ್ಯಕ್ತಿ ಎಂದು ತಿಳಿದುಬಂದಿದೆ.

ಸ್ಥಳೀಯ ವ್ಯಕ್ತಿ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿಯ ಶವದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪೋಲೀಸರು ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿ ,ಅಪರಿಚಿತ ಶವವಾದ್ದರಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿರಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹದ ವಾರಸುದಾರರು ಪತ್ತೆಯಾದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸುವಂತೆ ಗ್ರಾಮಾಂತರ ಎಸ್. ಐ. ಪ್ರಸನ್ನ ತಿಳಿಸಿದ್ದು , ದೂರವಾಣಿ ಸಂಖ್ಯೆ :08255235000 ಸಂಪರ್ಕ ಮಾಡಲು ಅವರು ತಿಳಿಸಿದ್ದಾರೆ.

driving
- Advertisement -

Related news

error: Content is protected !!