Sunday, July 26, 2026
spot_imgspot_img
spot_imgspot_img

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿ; ಯುವಕ ಸಾವು

- Advertisement -
- Advertisement -

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಢಿಕ್ಕಿಯಾಗಿ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಅಡ್ಡಹೊಳೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಹೊಳೆನರಸೀಪುರದ ಸಂಜಯ್‌ (25) ಎಂದು ಗುರುತಿಸಲಾಗಿದೆ.

ಕಾರು ಚಾಲಕ ಅರಕಲಗೂಡು ನಿವಾಸಿ ಸಂದೀಪ್‌, ಕಾರಿನಲ್ಲಿದ್ದ ಶೇಷ, ಮಹೇಶ್‌ ಅವರು ಅಪಾಯದಿಂದ ಪಾರಾಗಿದ್ದಾರೆ. ಸಂಜಯ್‌ ಹಾಗೂ ಇತರರು ತಮ್ಮ ತೋಟದಲ್ಲಿ ಬೆಳೆದ ಹೂಗಳನ್ನು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡಲು ಉಡುಪಿಗೆ ಬಂದಿದ್ದರು. ಹೂವು ಮಾರಾಟ ಮಾಡಿ ಮತ್ತೆ ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ.

- Advertisement -

Related news

error: Content is protected !!