Sunday, June 14, 2026
spot_imgspot_img
spot_imgspot_img

ಬಂಟ್ವಾಳ: ಅಪ್ರಾಪ್ತೆ ಬಾಲಕಿಯನ್ನು ಪ್ರಜ್ಞೆ ತಪ್ಪಿಸಿ ಗ್ಯಾಂಗ್ ರೇಪ್; FIR ದಾಖಲು

- Advertisement -
- Advertisement -

ಬಂಟ್ವಾಳ: ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಗೆ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಸಲಾಗಿದೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಾಲಕಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪೊಲೀಸರಿಗೆ ಆರೋಪಿಗಳ ಸುಳಿವು ಲಭ್ಯವಾಗಿದೆ. ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಶೀಘ್ರ ಬಂಧಿಸುವ ಸಾಧ್ಯತೆ ಇದೆ.

- Advertisement -

Related news

error: Content is protected !!