Saturday, June 6, 2026
spot_imgspot_img
spot_imgspot_img

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಹೊಡೆದಾಟ; ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿಕೊಂಡು ಪರಸ್ಪರ ಹೊಡೆದಾಟ ನಡೆಸಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅ. 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಕೃ಼ಷ್ಣ ನಾಯ್ಕ, ಹೆಚ್.ಸಿರವರು ಮಂಚಿ ಗ್ರಾಮದಲ್ಲಿ ಬೀಟ್ ಸಂಚರಿಸುತ್ತಿರುವಾಗ ಮಂಚಿ ಕಟ್ಟೆ ಎಂಬಲ್ಲಿ ಯುವಕರು ಗಲಾಟೆ ಮಾಡಿಕೊಳ್ಳುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ಹೋಗಿ ನೋಡಿದಾಗ ಜನರು ಗುಂಪು ಸೇರಿದ್ದು ಗುಂಪಿನಲ್ಲಿ ವಿಜೇತ್, ರಕ್ಷಿತ್‌ ಕೊಟ್ಟಾರಿ, ಪುಷ್ಪರಾಜ್, ಅಜೇಯ್, ಜಮೀರ್, ಮಹಮ್ಮದ್ ಮುಸ್ತಫ್ ರವರು ಗಲಾಟೆ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ದ್ವೇಷವನ್ನುಂಟು ಮಾಡುವ, ಸೌಹಾರ್ದತೆಗೆ ಬಾಧಕವಾಗುವ ರೀತಿಯಲ್ಲಿ ಪರಸ್ಪರವಾಗಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು, ಹೊಡೆದಾಡಿಕೊಂಡಿರುತ್ತಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ: 153/2025 ಕಲಂ: 189(2),191(2),196(1)(a),196(1)(b), R/W 190 BNS ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!