Friday, November 13, 2026
spot_imgspot_img
spot_imgspot_img

ಬಂಟ್ವಾಳ: ಮನೆಗಳ್ಳತನ ಪ್ರಕರಣ: 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು, ಆರೋಪಿ ನ್ಯಾಯಾಲಯಕ್ಕೆ ಶರಣು

- Advertisement -
- Advertisement -

ಬಂಟ್ವಾಳ: ಬಾಳ್ತಿಲ ಗ್ರಾಮದ ಕಾಂಪ್ರಬೈಲು ಎಂಬಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೈಕಿ ಓರ್ವ ಆರೋಪಿ ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಪೊಲೀಸರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಕಾಂಪ್ರಬೈಲು ನಿವಾಸಿ ಸತೀಶ್ ಶೆಣೈ (57) ಅವರು ಕಳೆದ ಫೆ.4ರಂದು ಸಂಜೆ ವೇಳೆ ಮನೆಗೆ ಬೀಗ ಹಾಕಿ ಕಾರ್ಯಕ್ರಮಕ್ಕೆ ತೆರಳಿದ್ದರು. ರಾತ್ರಿ ಹಿಂತಿರುಗಿ ಬಂದಾಗ ಮನೆಯ ಹಿಂಬದಿಯ ಬಾಗಿಲು ಮುರಿದಿರುವುದು ಕಂಡುಬಂದಿದೆ. ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಕೊಠಡಿಯ ಲಾಕರ್‌ನಲ್ಲಿದ್ದ ಸುಮಾರು ರೂ. 8,00,000 ಮೌಲ್ಯದ ಚಿನ್ನಾಭರಣ ಹಾಗೂ ರೂ. 5,000 ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 17/2026, ಕಲಂ 331(3), 331(4), 305 BNS-2023 ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳ ಪೈಕಿ ಬಂಟ್ವಾಳ ಕೊಳ್ನಾಡು ನಿವಾಸಿ ಮೊಹಮ್ಮದ್ ಮಿಸ್ಪಾ(21) ಎಂಬಾತನು ನ.11ರಂದು ನ್ಯಾಯಾಲಯಕ್ಕೆ ಶರಣಾಗಿದ್ದು, ಆತನನ್ನು ಪ್ರಕರಣದ ವಿಚಾರಣೆಗಾಗಿ ನ.11ರಂದು 2 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!