Sunday, June 14, 2026
spot_imgspot_img
spot_imgspot_img

ಬಂಟ್ವಾಳ: ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ; ಸವಾರ ಸಾವು..!

- Advertisement -
- Advertisement -

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರಿನ ನೆಹರೂನಗರದಲ್ಲಿ ನಡೆದಿದೆ.

ಮೃತಪಟ್ಟ ಸವಾರರನ್ನು ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಎಂದು ಗುರುತಿಸಲಾಗಿದೆ.

ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರೊಂದಿಗೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ನಡೆದಿದೆ.

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!