Sunday, June 7, 2026
spot_imgspot_img
spot_imgspot_img

ಬಂಟ್ವಾಳ: ಬೈಕ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಸವಾರ ಸಾವು; ಸ್ಥಳದಿಂದ ಪರಾರಿಯಾದ ಲಾರಿ ಚಾಲಕ!

- Advertisement -
- Advertisement -

ಬಂಟ್ವಾಳ: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಪಾಣೆಮಂಗಳೂರು ಸಮೀಪದಲ್ಲಿ ಬುಧವಾರ ನಡೆದಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.

ಮೃತಪಟ್ಟ ವ್ಯಕ್ತಿ ಮಂಚಿ ಗ್ರಾಮದ ಕಂಚಿಲ ನಿವಾಸಿ ಗಣೇಶ್ ನಾಯ್ಕ್(55). ಅವರು ಮಂಗಳೂರಿನ ಬ್ಯಾಂಕ್ ನಲ್ಲಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಮನೆಯಿಂದ ಕಚೇರಿಗೆ ಹೋಗುವ ವೇಳೆ ಘಟನೆ ನಡೆದಿದೆ.

ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಪ್ರಕರಣದ ಕುರಿತು ಬಂಟ್ವಾಳ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!