Sunday, July 6, 2025
spot_imgspot_img
spot_imgspot_img

ಬಂಟ್ವಾಳ: ಹೆಂಡತಿಯೊಂದಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ತಮ್ಮನ ಕೊಲೆ; ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಅತ್ತಿಗೆಯ ಜತೆಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಅಣ್ಣನೇ ತಮ್ಮನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬಂಟ್ವಾಳದ ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆಯಲ್ಲಿ ನಡೆದಿತ್ತು.

ಇದನ್ನೂ ಓದಿ: ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ನೇತೃತ್ವದ ತಂಡ ಬೊಂಡಾಲ ತಿರುವಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ, ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ರವಿ ಬಂಧಿತ ಆರೋಪಿ. ಪಾಣೆಮಂಗಳೂರಿನ ಬೊಂಡಾಲ ಶಾಂತಿಗುಡ್ಡೆ ನಿವಾಸಿ ಸುಂದರ(30) ಎಂಬಾತ ಶುಕ್ರವಾರ ತಡರಾತ್ರಿ ಸಲಾಕೆಯಿಂದ ಹೊಡೆದು ಕೊಲೆ ಮಾಡಿ ಅರೋಪಿ ರವಿ ತಲೆಮರೆಸಿಕೊಂಡಿದ್ದ.

ಕೊಲೆಗೆ ಕಾರಣವೇನು?

ಕೊಲೆಯಾದ ಸುಂದರ ಅವಿವಾಹಿತವಾಗಿದ್ದು, ಮನೆಯಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಮನೆಯ ಸಮೀಪದಲ್ಲಿ ಅಣ್ಣನ ಮನೆಯಿದ್ದು, ಅಲ್ಲಿಂದ ಅತ್ತಿಗೆ ಊಟ- ತಿಂಡಿ ನೀಡುತ್ತಿದ್ದರು. ಸುಂದರನಿಗೂ ಆತನ ಅತ್ತಿಗೆಗೂ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆತನ ಅಣ್ಣ ರವಿಗೂ ಪದೇ ಪದೇ ಜಗಳ ನಡೆಯುತ್ತಲೇ ಇತ್ತು.

ಶುಕ್ರವಾರ ತಡರಾತ್ರಿಯೂ ಅವರ ಮಧ್ಯೆ ಜಗಳ ನಡೆದಿದ್ದು, ಸುಂದರ ಬೊಬ್ಬೆ ಹೊಡೆಯುವುದನ್ನು ಕೇಳಿ ಮತ್ತರ‍್ವ ಅಣ್ಣ ರಮೇಶ ಅವರು ಹೋಗಿ ನೋಡಿದಾಗ, ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ತಲೆಗೆ ಹೊಡೆದಿದ್ದು, ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು. ಆರೈಕೆ ಮಾಡುತ್ತಿದ್ದಂತೆ ಮೃತಪಟ್ಟಿದ್ದಾನ. ಈ ವೇಳ ಆರೋಪಿ ರವಿಯು ಓಡಿ ಹೋಗಿ ತಲೆಮರೆಸಿಕೊಂಡಿದ್ದ ಬಂಟ್ವಾಳ ನಗರ ಪೊಲೀಸರು ಆರೋಪಿ ರವಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -

Related news

error: Content is protected !!