Saturday, April 27, 2024
spot_imgspot_img
spot_imgspot_img

ಬಂಟ್ವಾಳ: ಪೋಲೀಸ್ ಕುಟುಂಬಗಳ ಸದಸ್ಯರಿಗೆ ವ್ಯಾಕ್ಸಿನೇಷನ್‌ ಅಭಿಯಾನ ಆರಂಭ

- Advertisement -G L Acharya panikkar
- Advertisement -

ಬಂಟ್ವಾಳ: ದೇಶದಲ್ಲಿ ಕೊರೊನಾ ‌ವಾರಿಯರ್ಸ್ ಗಳಿಗೆ ಪ್ರದಾನಿ ಅವರ ಆದ್ಯತೆಯ ನೆಲೆಯಲ್ಲಿ ಲಸಿಕೆ ನೀಡಿದ್ದು, ಪ್ರಸ್ತುತ ಅವರ ಕುಟುಂಬಗಳಿಗೆ ಹಂತ – ಹಂತವಾಗಿ ಲಸಿಕೆ ನೀಡಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದ್ದಾರೆ.

ಅವರು ಬಿಸಿರೋಡಿನ ರಂಗೋಲಿ ಹೋಟೆಲ್ ನಲ್ಲಿ ಪೋಲೀಸ್ ಕುಟುಂಬಗಳ ಸದಸ್ಯರಿಗೆ ವ್ಯಾಕ್ಸಿನೇಷನ್‌ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರಕಾರಿ ನೌಕರರಿಗೆ ಸರಕಾರ ಮೊದಲ ಆದ್ಯತೆಯಲ್ಲಿ ಲಸಿಕೆ ನೀಡಿದ ಪರಿಣಾಮವಾಗಿ ಪ್ರಸ್ತುತ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಲು ಸಹಕಾರಿಯಾಯಿತು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬಂಟ್ಚಾಳ ನಗರ ಪೋಲೀಸ್ ಠಾಣಾ ಇನ್ಸ್ ಪೆಕ್ಟರ್ ಚೆಲುವರಾಜ್, ಗ್ರಾಮಾಂತರ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್. ಐ.ಅವಿನಾಶ್, ಗ್ರಾಮಾಂತರ ಎಸ್.ಐ.ಪ್ರಸನ್ನ, ಟ್ರಾಫಿಕ್ ಎಸ್.ಐ.ರಾಜೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ| ದೀಪಾಪ್ರಭು, ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!