Friday, June 19, 2026
spot_imgspot_img
spot_imgspot_img

ಬಂಟ್ವಾಳ: ರುದ್ರಭೂಮಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳವು

- Advertisement -
- Advertisement -

ಬಂಟ್ವಾಳ: ಮನೆ, ದೇವಸ್ಥಾನ, ಅಂಗಡಿ ಹೀಗೆ ಬೇರೆ ಬೇರೆ ಕಡೆ ಕಳ್ಳತನ ನಡೆಯುವುದು ಸಾಮಾನ್ಯ, ಆದರೆ ರುದ್ರಭೂಮಿಯಲ್ಲಿ ಕಳ್ಳತನ ನಡೆದಿರುವ ವಿಚಿತ್ರ ಘಟನೆಯೊಂದು ಅಮ್ಡಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಅಮ್ಡಾಡಿ ಗ್ರಾಮದ ದೇವಿನಗರ ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಮೃತದೇಹ ಸುಡುವ ಸಿಲಿಕಾನ್ ಚೇಂಬ‌ರ್, ಹಿತ್ತಾಳೆಯ ನೀರಿನ ನಲ್ಲಿ, ಕಬ್ಬಿಣದ ಏಣಿ, ಕಬ್ಬಿಣದ ಗೇಟ್ ಹಾಗೂ ಇನ್ನಿತರ ಸುಮಾರು 4 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಅಮ್ಡಾಡಿ ಗ್ರಾ.ಪಂ.ಅಧ್ಯಕ್ಷ ವಿಜಯ್ ಅವರು ತಿಳಿಸಿದ್ದಾರೆ.

ಆಗಸ್ಟ್ 11 ರಂದು ಸ್ಥಳೀಯ ನಿವಾಸಿ ಐತ್ತಪ್ಪ ಪೂಜಾರಿ ಎಂಬವರ ಮೃತದೇಹದ ದಹನ ಮಾಡಲು ರುದ್ರಭೂಮಿಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳ್ಳತನ ಪ್ರಕರಣದ ಕುರಿತು ಅಮ್ಡಾಡಿ ಗ್ರಾಮ ಪಂಚಾಯತ್‌ನ ವತಿಯಿಂದ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡುತ್ತೇವೆ ಎಂದು ವಿಜಯ್ ಅವರು ತಿಳಿಸಿದ್ದಾರೆ.

ಅಮ್ಡಾಡಿ ಗ್ರಾಮದಲ್ಲಿ ಕೆಲವು ದಿನಗಳಿಂದ ಕಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಮನೆಯ ಹೊರಗಡೆ ನಿಲ್ಲಿಸಿರುವ ವಾಹನಗಳ ಸಹಿತ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿಗಾ ವಹಿಸಿ ಎಂದು ವಿಜಯ್ ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!