Saturday, June 20, 2026
spot_imgspot_img
spot_imgspot_img

ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಮುಂದಾಳತ್ವದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ

- Advertisement -
- Advertisement -

ಬಂಟ್ವಾಳ: ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ, ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಸಂಗಬೆಟ್ಟು ಗ್ರಾಮದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸೇವದಾಳ ಅಧ್ಯಕ್ಷ ಅಶೋಕ್ ಆಚಾರ್ಯ ಸಿದ್ದಕಟ್ಟೆ, ಸಂಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯ ದೇವಪ್ಪ ಕರ್ಕೇರ, ವಲಯ ಅಧ್ಯಕ್ಷ ದಿನೇಶ್ ಶೆಟ್ಟಿಗಾರ್, ಪ್ರಮುಖ ಶಿವಾನಂದ ರೈ, ದಾಮೋದರ ನಾಯಕ್ ಕರ್ಪೆ, ಗಣೇಶ್ ನಾಯಕ್ ಕರ್ಪೆ, ಅಶೋಕ್ ಪೂಜಾರಿ, ಬಂಟ್ವಾಳ ಸಾಮಾಜಿಕ ಜಾಲತಾಣ ಸಂಯೋಜಕರಾದ ಪದ್ಮನಾಭ ಸಾವಂತ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!