Friday, June 19, 2026
spot_imgspot_img
spot_imgspot_img

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರವೆಸಗಿ ವಿದೇಶಕ್ಕೆ ಪರಾರಿ; ಹೆರಿಗೆಯ ಬಳಿಕ ಬೆಳಕಿಗೆ ಬಂದ ಪ್ರಕರಣ!

- Advertisement -
- Advertisement -

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಪ್ರಕರಣ ದಾಖಲಾಗಿದೆ.ಆರೋಪಿ ಉಪ್ಪಿನಂಗಡಿ ನಿವಾಸಿ ಮಸೂದ್ ಎನ್ನಲಾಗಿದೆ.

17 ವರ್ಷ ಪ್ರಾಯದ ಸಂತ್ರಸ್ತ ಬಾಲಕಿ ಮಣಿನಾಲ್ಕೂರು ಗ್ರಾಮದ ನಿವಾಸಿಯಾಗಿದ್ದು, ಇದೀಗ ಆಕೆ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಸೂದ್ ಒಂದು ವರ್ಷದ ಹಿಂದೆ ಇನ್ ಸ್ಟಾಗ್ರಾಂನಲ್ಲಿ ಸಂತ್ರಸ್ತ ಬಾಲಕಿಗೆ ಪರಿಚಯವಾಗಿದ್ದನು. ಬಳಿಕ ಆತ ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಬಂದು ಅತ್ಯಾಚಾರವೆಸಗಿ ಆ ಬಳಿಕ ನಾಪತ್ತೆಯಾಗಿದ್ದಾನೆ. ಬಂಟ್ವಾಳ ಪೊಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!