Tuesday, June 23, 2026
spot_imgspot_img
spot_imgspot_img

ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ಅತ್ಯಾಚಾರಗೊಳಗಾದ ವಿದ್ಯಾರ್ಥಿನಿ; ಕೇಸ್ ದಾಖಲು!

- Advertisement -
- Advertisement -

ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆರೋಪಿಯಾಗಿದ್ದಾನೆ.

ಆತನ ಪತ್ನಿಯ ಅಕ್ಕ‌ನ ಮಗಳ ಮೇಲೆ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಮನೆಯವರಿಗೆ ತಿಳಿಸಿದಲ್ಲಿ ಕೊಲೆ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ.ರೋಡ್ ನ ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು, ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದನು. ಆಗಿನಿಂದಲೇ ಆರೋಪಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದಾನೆ. ಯುವತಿಯು ಈತನ ಕಿರುಕುಳ ತಡೆಯಲಾಗದೆ ಮನೆಯವರಿಗೆ ತಿಳಿಸಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.

- Advertisement -

Related news

error: Content is protected !!