- Advertisement -
- Advertisement -
ಬಂಟ್ವಾಳ: ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಕಾರ್ಯಾಚರಿಸುತ್ತಿದ್ದ ರಿಕ್ರಿಯೇಶನ್ ಕ್ಲಬ್ ಗೆ ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು, ಒಟ್ಟು 39 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಇನ್ಸ್ಪೆಕ್ಟರ್ ಚೆಲುವರಾಜು ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಲ್ಲಿ ಕೋವಿಡ್ ನಿಯಮವನ್ನು ಪಾಲಿಸದೆ ಗುಂಪು ಸೇರಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡದೇ ಸ್ಕಿಲ್ ಗೇಮ್ ಆಡುತ್ತಿದ್ದರು.
ಕ್ಲಬ್ ಗೆ ದಾಳಿ ನಡೆದಿರುವ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದು, ಬಳಿಕ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದರು.
- Advertisement -