Friday, June 27, 2025
spot_imgspot_img
spot_imgspot_img

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಾಯಗೊಂಡ ಸ್ಕೂಟರ್‌ ಸವಾರ ಮೃತ್ಯು..!

- Advertisement -
- Advertisement -

ಬಂಟ್ವಾಳ: ನಾಲ್ಕು ದಿನದ ಹಿಂದೆ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಸ್ಕೂಟರ್ ಸವಾರ ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಎಂದು ಗುರುತಿಸಲಾಗಿದೆ.

ಫೆ.16 ರಂದು ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಅವರು ರಾತ್ರಿ 9.50ರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷತನದಿಂದ ಚಾಲಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ ಬಂದು ಸುಂದರ ಅವರ ಸ್ಕೂಟರಿಗೆ ಎದುರುಗಡೆಯಿಂದ ಡಿಕ್ಕಿ ಪಡಿಸಿದ ಪರಿಣಾಮ ಅವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು‌‌ .

ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಒಂದು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!