- Advertisement -
- Advertisement -
ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಕಲೈಮಾರ್ ಪಿ. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿದ್ದ ಪ್ರಸ್ತುತ ಎಸ್‌ಐ ಆಗಿ ಪದೋನ್ನತ್ತಿ ಹೊಂದಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಕಳೆದ 27 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಅವರು ಈ ಹಿಂದೆ ಬೆಳ್ತಂಗಡಿಯಲ್ಲಿ ಎಎಸ್‌ಐಯಾಗಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮಾರ್ಗದರ್ಶನ ಪಡೆದರು. ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರು ಪೊಲೀಸ್ ಸ್ಟಾರ್ ತೊಡಿಸಿ ಅಧಿಕಾರ ನೀಡಿದರು.
- Advertisement -