Sunday, June 15, 2025
spot_imgspot_img
spot_imgspot_img

ಬಂಟ್ವಾಳ: ಕಳ್ಳತನ ಪ್ರಕರಣ; ಆರೋಪಿಯ ಬಂಧನ, 1.49 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನ ವಶಕ್ಕೆ..!

- Advertisement -
- Advertisement -

ಬಂಟ್ವಾಳ: ತುಂಬೆ ಗ್ರಾಮದ ಪರ್ಲಬೈಲಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಒಂದೇ ದಿನದಲ್ಲಿ ಕಳವು ಮಾಡಿದ ಚಿನ್ನ ಸಹಿತ ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಪರ್ಲಬೈಲು ನಿವಾಸಿ ಹಸನ್ ಬಾವಾ ಎಂದು ಗುರುತಿಸಲಾಗಿದೆ.

ಪೊಲೀಸರು ಆತನಿಂದ ಕಳವು ಮಾಡಿದ 1.49 ಲಕ್ಷ ರೂ. ಮೌಲ್ಯದ 28 ಗ್ರಾಂ ತೂಕದ ಚಿನ್ನದ ಹಾರವನ್ನು ವಶಪಡಿಸಿಕೊಂಡಿದ್ದಾರೆ. ಆತ ಮೇ 19ರಂದು ಪರ್ಲಬೈಲು ಹಾಮದ್ ಹಾಜಿ ರಸ್ತೆಯ ನಿವಾಸಿ ಅಬ್ದುಲ್ ಮಜೀದ್ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲಲ್ಲೇ ಮನೆಯ ಮೇಲ್ಛಾವಣಿಯ ಹಂಚನ್ನು ತೆಗೆದು ಒಳಗೆ ನುಗ್ಗಿ ಕಪಾಟಿನಲ್ಲಿ ಇಟ್ಟಿದ್ದ ಚಿನ್ನದ ಹಾರವನ್ನು ಕದ್ದಿದ್ದಾನೆ ಎಂದು ವರದಿಯಾಗಿದೆ.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಅಡಿಶನಲ್ ಎಸ್‌ಪಿ ರಾಜೇಂದ್ರ ಹಾಗೂ ಬಂಟ್ವಾಳ ಡಿವೈಎಸ್‌ಪಿ ಎಸ್. ವಿಜಯಪ್ರಸಾದ್ ಅವರ ಮಾರ್ಗದರ್ಶನದಂತೆ ಬಂಟ್ವಾಳ ಗ್ರಾಮಾಂತರ ಇನ್‌ಸ್ಪೆಕ್ಟರ್ ಶಿವಕುಮಾರ್ ಬಿ. ನೇತೃತ್ವದಲ್ಲಿ ಪಿಎಸ್‌ಐಗಳಾದ ಮಂಜುನಾಥ ಟಿ., ಖೀರಪ್ಪ ಘಟಕಾಂಬಳೆ, ಎಎಸ್‌ಐಗಳಾದ ಗಿರೀಶ್, ಬಾಲಕೃಷ್ಣ, ಎಚ್‌ಸಿಗಳಾದ ನಝೀರ್, ಹರಿಶ್ಚಂದ್ರ, ಲೋಕೇಶ್, ಕೃಷ್ಣ ನಾಯ್ಕ, ಪಿಸಿ ಸಹದೇವ ಅವರು ವಿಶೇಷ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

- Advertisement -

Related news

error: Content is protected !!