

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿ ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬಿ.ಸಿರೋಡ್ ಸಮೀಪದ ತಲಪಾಡಿ ಜೋಡುಮಾರ್ಗ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಗುರುತಿಸಲಾಗಿದೆ.
ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಎಂಬಾತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಲಯದಲ್ಲಿ ವಿಚಾರಣೆಯಲ್ಲಿದ್ದು ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ಮಾನ್ಯ ನ್ಯಾಯಾಲಯವು ಈತನ ಮೇಲೆ 08 ಬಾರಿ ಬಂಧನ ವಾರಂಟ್ ಹೊರಡಿಸಿರುತ್ತದೆ.
ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಆ.25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ.
ಈತನ ಮೇಲೆ ದಾಖಲಾಗಿ ವಿಚಾರಣ ಹಂತದಲ್ಲಿರುವ ಪ್ರಕರಣಗಳು:
1.ಮಂಗಳೂರು ಪೂರ್ವ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 1/2023 ಕಲಂ: 489(A),(B)(C), r/w 34 IPC
(ಪ್ರಸ್ತುತ ಮಾನ್ಯ ನ್ಯಾಯಾಲಯವು ಈತನ ಮೇಲೆ ದಸ್ತಗಿರಿ ವಾರೆಂಟ್ ಹೊರಡಿಸಿರುತ್ತದೆ)
2.ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 128/2022 ಕಲಂ:392, 506, r/w 34 IPC
(ಪ್ರಸ್ತುತ ಮಾನ್ಯ ನ್ಯಾಯಾಲಯವು ಈತನ ಮೇಲೆ ದಸ್ತಗಿರಿ ವಾರೆಂಟ್ ಹೊರಡಿಸಿರುತ್ತದೆ)
3.ಮಡಿವಾಳ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 235/2022 ಕಲಂ: 489(A),(B), 420, r/w 34 IPC
( ಪ್ರಸ್ತುತ ಮಾನ್ಯ ನ್ಯಾಯಾಲಯವು ಈತನ ಮೇಲೆ ಉದ್ಘೋಷಣೆ ಹೊರಡಿಸಿರುತ್ತದೆ)
4.ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 147/2016 ಕಲಂ 398, 402 ಐಪಿಸಿ (ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ)
5.ಮಂ. ಬರ್ಕೆ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 93/2015 ಕಲಂ; 143, 323, 324 353, 427, 302 r/w 149 IPC (ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ)
6.ಪುತ್ತೂರು ನಗರ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 112/2017 ಕಲಂ; 120(b), 341, 323, 307, 427, r/w 34 IPC (ಮಾನ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ)
7.ವಿಟ್ಲ ಪೊಲೀಸ್ ಠಾಣೆ ಅ.ಕ್ರ ಸಂಖ್ಯೆ 181/2015 ಕಲಂ 143, 147, 148, 341, 324, 307, 302, 120ಬಿ IPC (ಮಾನ್ಯ ನ್ಯಾಯಾಲಯದಲ್ಲಿ ಖುಲಾಸೆಗೊಂಡಿರುತ್ತದೆ).








