Saturday, May 4, 2024
spot_imgspot_img
spot_imgspot_img

ಬಂಟ್ವಾಳ: ಮಹಡಿಯ ಮೇಲಿಂದ ಬಿದ್ದು ಬಾಲಕ ಸಾವು..!

- Advertisement -G L Acharya panikkar
- Advertisement -

ಬಂಟ್ವಾಳ: ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ್ದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮೃತಪಟ್ಟ ಬಾಲಕ ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಎಂದು ಗುರುತಿಸಲಾಗಿದೆ.

ಬಾಲಕ ಆದಿಶ್ ತಮ್ಮ ಮನೆಯ್ ಮಹಡಿಯಲ್ಲಿ ದೊಡ್ಡಮ್ಮನ ಜತೆ ಮಲಗಿದ್ದು, ಮುಂಜಾನೆ ಮೊಬೈಲ್ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಮನೆಮಂದಿ ಬೆಳಗ್ಗೆ ಎದ್ದು ನೋಡುವಾಗ ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆತಂದರೂ ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.ಬಂಟ್ವಾಳ ನಗರ ಪೊಲೀಸ್ ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!