Monday, May 6, 2024
spot_imgspot_img
spot_imgspot_img

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!

- Advertisement -G L Acharya panikkar
- Advertisement -

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಬಿ.ಸಿ ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕ ಆಲಡ್ಕ ನಿವಾಸಿ ಆಶ್ರಫ್ (32) ಎಂದು ಗುರುತಿಸಲಾಗಿದೆ.

ಸ್ನೇಹಿತನಿಗೆ ಸಹಾಯ ಮಾಡಲು ಹೋದ ವ್ಯಕ್ತಿಯ ಪ್ರಾಣಕ್ಕೆ ಕುತ್ತು ತಂದಿದೆ. ಆಲಡ್ಕ ನಿವಾಸಿ ತಸ್ವೀರ್, ಆಶ್ರಫ್ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿಸಿರೋಡಿಗೆ ತೆರಳಿದ್ದ.

ಬೆಳಿಗ್ಗೆ ಆಶ್ರಫ್ ಕೈಕಂಬದಲ್ಲಿರುವ ತರಕಾರಿ ಅಂಗಡಿಗೆ ಇನ್ನೇನು ಸ್ನೇಹಿತ ತನ್ನೀರ್ ನ್ನು ಇಳಿಸಬೇಕು ಅನ್ನುವಷ್ಟರಲ್ಲಿ ಅದೇ ಅಂಗಡಿಗೆ ತರಕಾರಿ ತಂದು ಖಾಲಿ ಮಾಡಿ ವಾಪಾಸ್ ಹೋಗುವ ಲಾರಿಯ ಚಾಲಕ ಲಾರಿಯನ್ನು ಅಜಾಗರೂಕತೆಯಿಂದ ಹಿಂಬದಿಗೆ ಚಲಿಸಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.

- Advertisement -

Related news

error: Content is protected !!