Sunday, May 19, 2024
spot_imgspot_img
spot_imgspot_img

ಬಂಟ್ವಾಳ: ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು

- Advertisement -G L Acharya panikkar
- Advertisement -

ಬಂಟ್ವಾಳ: ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಂಟ್ವಾಳದ ವ್ಯಕ್ತಿಯೋರ್ವರು ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ (75) ಮೃತಪಟ್ಟವರು. ಜನಾರ್ದನ ಅವರು ತಮ್ಮ ಕುಟುಂಬದ ಜತೆ ರವಿವಾರ ಸಂಜೆಯ ರೈಲಿನ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸಾಮಾಜಿಕವಾಗಿ ಸಕ್ರೀಯರಾಗಿದ್ದ ಅವರು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಕಾರು ಚಾಲಕರಾಗಿದ್ದ ಅವರು ಬಿಎಂಎಸ್ ಸಂಘಟನೆಯಲ್ಲಿ ಸಕ್ರೀಯರಾಗಿದ್ದರು. ಕುಲಾಲ ಸಂಘಟನೆ ಬೆಳವಣಿಗೆಗೆ ಶ್ರಮಿಸಿದ್ದು, ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದರು.

- Advertisement -

Related news

error: Content is protected !!