Saturday, July 25, 2026
spot_imgspot_img
spot_imgspot_img

ಬಂಟ್ವಾಳ : ಟ್ರಕ್-ಕಾರು ನಡುವೆ ಭೀಕರ ಅಪಘಾತ; ಓರ್ವ ಗಂಭೀರ..!

- Advertisement -
- Advertisement -

ಬಂಟ್ವಾಳ : ಟ್ರಕ್ ಹಾಗೂ ಕಾರು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಪಾಣೆಮಂಗಳೂರು ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಪಾಣೆಮಂಗಳೂರು ಸಮೀಪದ ಬೋಳಂಗಡಿ ನಿವಾಸಿ ಸಾಮಾಜಿಕ ಕಾರ್ಯಕರ್ತ ಎಂ.ಹೆಚ್. ಮುಸ್ತಫಾ ಎಂದು ಗುರುತಿಸಲಾಗಿದೆ.

ಮೆಲ್ಕಾರ್ ನಿಂದ ದೇರಳಕಟ್ಟೆ ಕಡೆಗೆ ಹೋಗುತ್ತಿದ್ದ ಟ್ರಕ್, ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದು, ಅಪಘಾತ ನಡೆದ ತಕ್ಷಣ ಸ್ಥಳೀಯರು ಕಾರಿನಲ್ಲಿ ಸಿಲುಕಿದ್ದ ಮುಸ್ತಾಫ ಅವರನ್ನು ಕಾರಿನಿಂದ ಹೊರಗೆ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದೆ.

ತೀವ್ರ ಸ್ವರೂಪದ ಗಾಯವಾಗಿರುವ ಮುಸ್ತಾಫ ಅವರಿಗೆ ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ. ಗಾಯಾಳು ಮುಸ್ತಾಫ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!