Friday, June 5, 2026
spot_imgspot_img
spot_imgspot_img

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ; ವ್ಯಕ್ತಿ ಸಾವು..!

- Advertisement -
- Advertisement -

ಬಂಟ್ವಾಳ: ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮದ ವಗ್ಗ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ರಫೀಕ್ (55) ಎಂದು ಗುರುತಿಸಲಾಗಿದೆ.

ಕಾಡಬೆಟ್ಟು ಗ್ರಾಮ, ವಗ್ಗ ಅಂಚೆ, ಬಂಟ್ವಾಳ ಎಂ ದಾವೂದ್ ಎಂಬವರ ದೂರಿನಂತೆ ನ.14 ರಂದು ಬಂಟ್ವಾಳ ತಾಲೂಕು ಕಾಡಬೆಟ್ಟು ಗ್ರಾಮದ ವಗ್ಗ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಬೆಳಿಗ್ಗೆ ಬಿ.ಸಿ.ರೋಡ್ ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ಬಂದ KA-19-HK-7432 ನೇ ಮೋಟಾರ್ ಸೈಕಲ್‌‌ ಸವಾರ ಪವನ್ ಎಂಬವರು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಸವಾರಿ ಮಾಡಿಕೊಂಡು ಬಂದು ರಸ್ತೆ ದಾಟಲು ನಿಂತಿದ್ದ ಮೊಹಮ್ಮದ್ ರಫೀಕ್ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ಡಾಂಬರು ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿರುತ್ತಾರೆ.

ಗಾಯಾಳನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 161/2024 ಕಲಂ : 281, 106 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

- Advertisement -

Related news

error: Content is protected !!