Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!

- Advertisement -
- Advertisement -

ಬಂಟ್ವಾಳ: ವ್ಯಕ್ತಿಯೋರ್ವ ಟೆಲಿಗ್ರಾಂ ಮೂಲಕ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ಹಣವನ್ನು ವಂಚಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಮಹಿಳೆಯೋರ್ವರಿಗೆ 15 ಡಿಸೆಂಬರ್ 2023 ರಲ್ಲಿ ಟೆಲಿಗ್ರಾಂ ಮೂಲಕ Aman Gonda ಎಂಬುದಾಗಿ ತನ್ನ ಪರಿಚಯಿಸಿಕೊಂಡ ವ್ಯಕ್ತಿಯೋರ್ವ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು ಎಂಬುದಾಗಿ ತಿಳಿಸಿರುತ್ತಾನೆ. ಅದರಂತೆ ಮಹಿಳೆ ಏಜೆಂಟ್ Ken ಎಂದು ತನ್ನನ್ನು ಪರಿಚಯಿಸಿಕೊಂಡ ವ್ಯಕ್ತಿಯೋರ್ವ ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟಾಗಿ ಸರಿಸುಮಾರು ಒಟ್ಟು 10 ಲಕ್ಷವನ್ನು ತನ್ನ ಬ್ಯಾಂಕ್ ಖಾತೆಯಿಂದ ವರ್ಗಾಯಿಸಿರುತ್ತಾರೆ. ಹಣವನ್ನು ಹಿಂತಿರುಗಿಸದೇ, ಮೋಸದ ಜಾಲತಾಣದ ಮೂಲಕ ವರ್ಗಾಯಿಸಿಕೊಂಡು ವಂಚನೆ ಮಾಡಿರುತ್ತಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ:- 121/2024 ಕಲಂ: 66(C), 66(D), It Act ಹಾಗೂ ಕಲಂ: 419, 420 ಐಪಿಸಿ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

- Advertisement -

Related news

error: Content is protected !!