Friday, October 16, 2026
spot_imgspot_img
spot_imgspot_img

ಬಂಟ್ವಾಳ: ಕಳೆದೆರಡು ತಿಂಗಳ ಹಿಂದೆ ನಡೆದ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು

- Advertisement -
- Advertisement -

ಬಂಟ್ವಾಳ: ಎರಡು ತಿಂಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಯುವಕನನ್ನು ಬಂಟ್ವಾಳ ಬಿ.ಕಸ್ಬಾ ಗ್ರಾಮದ ಮುಗ್ಡಾಲ್ ಗುಡ್ಡೆ ನಿವಾಸಿ ವಿನಯ್ (24) ಎಂದು ಗುರುತಿಸಲಾಗಿದೆ.

ಕಳೆದ ಮಾ.10 ರಂದು ಪಾಣೆಮಂಗಳೂರು ಅಕ್ಕರಂಗಡಿ ಎಂಬಲ್ಲಿ ವಿನಯ್ ಪ್ರಯಾಣಿಸುತ್ತಿದ್ದ ಸ್ಕೂಟರ್ ಗೆ ಪಿಕಪ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ವಿನಯ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಕೋಮಾ ಸ್ಥಿತಿಯಲ್ಲಿದ್ದ ವಿನಯ್ ಕಳೆದ ಎರಡು ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ವಿನಯ್ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!