Sunday, April 28, 2024
spot_imgspot_img
spot_imgspot_img

ಬಂಟ್ವಾಳ: ಇಲೆಕ್ಟ್ರಾನಿಕ್ ಅಂಗಡಿಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ಸೊತ್ತು ಸುಟ್ಟು ಕರಕಲು

- Advertisement -G L Acharya panikkar
- Advertisement -

ಬಂಟ್ವಾಳ: ಇಲೆಕ್ಟ್ರಾನಿಕ್ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಭಾಗಶ: ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ. ಬಳಿಕ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಸೇರಿ ಬೆಂಕಿ ನಂದಿಸುವಲ್ಲಿ ಸಫಲರಾದರು.

ಅಂಗಡಿಯಲ್ಲಿದ್ದ ಸುಮಾರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಟಿ.ವಿ.ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳನ್ನು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!