Monday, June 8, 2026
spot_imgspot_img
spot_imgspot_img

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತ; ಮನೆ ಸಂಪೂರ್ಣ ಸುಟ್ಟು ಕರಕಲು..!

- Advertisement -
- Advertisement -

ಬಂಟ್ವಾಳ: ಆಕಸ್ಮಿಕ ಬೆಂಕಿ ಅನಾಹುತಕ್ಕೆ ಕೂಲಿ ಕಾರ್ಮಿಕನ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲಿಯನಡುಗೋಡು ಎಂಬಲ್ಲಿ ನಡೆದಿದೆ.

ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ ಮೋನಮ್ಮ ಎಂಬವರ ಮನೆಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂ ಮೌಲ್ಯದ ಮನೆ ಸಂಪೂರ್ಣ ಭಸ್ಮವಾಗಿದೆ.

ಮೋನಮ್ಮ ಅವರು ಇಬ್ಬರು ಮಕ್ಕಳ ಜೊತೆ ಗ್ರಾಮ ದೇವಸ್ಥಾನ ಪೂಂಜಾ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಗೆ ತೆರಳಿದ್ದರು.ಇವರು ಜಾತ್ರೆಯಿಂದ ವಾಪಸು ಮನೆಗೆ ಬಂದಾಗ ಮನೆಯನ್ನು ಸಂಪೂರ್ಣ ಬೆಂಕಿ ನುಂಗಿತ್ತು. ರಾತ್ರಿ ವೇಳೆ ಹೊಗೆಯನ್ನು ಕಂಡ ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಮಾಡಿದ್ದಾರೆ. ಅದಾಗಲೇ ಬೆಂಕಿ ಮನೆಯನ್ನು ಆವರಿಸಿಕೊಂಡಿತ್ತು.

ಮೋನಮ್ಮ ಅವರು ಬಡ ಕುಟುಂಬದ ಮಹಿಳೆಯಾಗಿದ್ದು, ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಸೀಟಿನ ತಗಡಿನ ಮನೆಯಲ್ಲಿ ವಾಸವಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ಒಬ್ಬಳು ಡಿಗ್ರಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಇನ್ನೊಬ್ಬಳು. ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿದೆ. ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯೆ ಶೋಭಾ, ಪಿಡಿಒ ಪದ್ಮನಾಭ ನಾಯ್ ಅವರು ಬೇಟಿ ನೀಡಿದ್ದಾರೆ.

- Advertisement -

Related news

error: Content is protected !!