Monday, July 27, 2026
spot_imgspot_img
spot_imgspot_img

ಬಂಟ್ವಾಳ: ಹತ್ತು ಅಡಿ ಆಳಕ್ಕೆ ಉರುಳಿದ ಅಲ್ಟೋ ಕಾರು: ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಬಂಟ್ವಾಳ: ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಮಾರುತಿ ಅಲ್ಟೋ ಕಾರು ರಸ್ತೆ ಬಿಟ್ಟು ಸುಮಾರು ಹತ್ತು ಅಡಿ ಆಳಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಈ ಘಟನೆಯಲ್ಲಿ ಐದು ವರ್ಷದ ಬಾಲಕ ಸುವಿದ್ ಎಂಬಾತನಿಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲಿಪಾದೆಯಿಂದ ಬಿ.ಸಿರೋಡು ಕಡೆಗೆ ಬರುವ ವೇಳೆ ಈ ಅಪಘಾತ ನಡೆದಿದ್ದು ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು ಬೈಪಾಸ್ ಕೆಂಪುಗುಡ್ಡೆ ಕ್ರಾಸ್ ನ ರಸ್ತೆಯ ಬದಿಯಲ್ಲಿ ಇದ್ದ ವಿದ್ಯುತ್ ತಂತಿ ಕಂಬಕ್ಕೆ ಢಿಕ್ಕಿ ಹೊಡೆದ ಕಾರು ಬಳಿಕ ಆಳೆತ್ತರದ ಗುಂಡಿಗೆ ಪಲ್ಟಿಯಾಗಿ ಬಿದ್ದಿದೆ. ಅಲ್ಲಿಪಾದೆ ನಿವಾಸಿ ಗಿರೀಶ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು ಇಬ್ಬರು ಮಕ್ಕಳು ಸಹಿತ ನಾಲ್ಕು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೋಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

vtv vitla
- Advertisement -

Related news

error: Content is protected !!