Sunday, June 14, 2026
spot_imgspot_img
spot_imgspot_img

ಬಂಟ್ವಾಳ : ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಬಂಟ್ವಾಳ: ವ್ಯಕ್ತಿಯೋರ್ವನು ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು ಈತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಕಲೆಂಜಿಬೈಲು ನಿವಾಸಿ ಅಬ್ದುಲ್ ಸಲೀಂ (32) ಎಂದು ಗುರುತಿಸಲಾಗಿದೆ. ಅಬ್ದುಲ್ ಸಲೀಂ ಸಜೀಪ ಮುನ್ನೂರು ಗ್ರಾಮದ ನಂದಾವರದ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ನಂದಾವರ ಜಂಕ್ಷನ್ ನಲ್ಲಿ ಮಾದಕ ವಸ್ತು ಸೇವಿಸಿದ ನಶೆಯಲ್ಲಿ ತೊಂದರೆ ನೀಡುತ್ತಿದ್ದ ವೇಳೆ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇನ್ನು ಬಂಟ್ವಾಳ ನಗರ ಪೋಲೀಸ್ ಠಾಣಾ ಎಸ್.ಐ. ರಾಮಕೃಷ್ಣ ನೇತೃತ್ವದ ಪೋಲೀಸರ ತಂಡ ಆರೋಪಿಯನ್ನು ನಂದಾವರದಲ್ಲಿ ಬಂಧಿಸಿ ವೈದ್ಯಕೀಯ ತಪಾಸಣೆ ನಡೆಸಿದ್ದು, ಗಾಂಜಾ ಸೇವನೆ ದೃಢಪಟ್ಟಿದೆ. ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Insta: glacharyajewellers
Fb: glacharya

- Advertisement -

Related news

error: Content is protected !!